ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಮಾಡಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಡಿ ದೂರು ದಾಖಲಿಸಿಕೊಂಡ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆದರೀಗ ದೂರುದಾರೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದೂರುದಾರೆ ಕಳೆದ ಕೆಲ ವರ್ಷಗಳಿಂದ ಮಾರಣಂತಿಕ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.