ಬೆಂಗಳೂರು : ತೃತೀಯ ಲಿಂಗಿಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ವಿನೂತನ ಯತ್ನ ನಡೆಸಿದ್ದು, ವಿಧಾನಸಭೆ ಕಲಾಪ ವೀಕ್ಷಿಸಲು ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಇಂದಿನ ವಿಧಾನಸಭೆ ಕಲಾಪವನ್ನು ವೀಕ್ಷಿಸಲು ಆಹ್ವಾನಿಸುವ ಮೂಲಕ ಲೈಂಗಿಕ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಒಂದು ವಿನೂತನ ಹೆಜ್ಜೆ ಇರಿಸಲಾಗಿದೆ. ತೃತೀಯ ಲಿಂಗಿಗಳಿಗೆ ಸಮಾನ ಅವಕಾಶಗಳನ್ನು ನೀಡುವ ಮೂಲಕ ಸಮಸಮಾಜದ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ತೃತೀಯ ಲಿಂಗಿಗಳಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕು, ಅವರನ್ನು ಬೇರ್ಪಡಿಸದೇ ಅವರಿಗೂ ಮುಕ್ತ ಅವಕಾಶ ನೀಡಬೇಕು. ವಿಧಾನಸಭೆ ಕಲಾಪ ವೀಕ್ಷಿಸಲು ಲೈಂಗಿಕ ಅಲ್ಪಸಂಖ್ಯಾತರಿಗೆ ಅವಕಾಶ ನೀಡಿದ ಸಭಾಧ್ಯಕ್ಷರಿಗೆ ಹಾಗೂ ಎಲ್ಲರಿಗೂ ಧನ್ಯವಾದಗಳು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.