ಶಿವಮೊಗ್ಗ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಚರ್ಚ್ ವೊಂದರ ಪಾದ್ರಿ ಹಾಗೂ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿನ್ ಫರ್ನಾಂಡಿಸ್ ಎಂಬುವವರನ್ನು ಬಂಧಿಸಲಾಗಿದೆ.
ಆರೋಪಿಗಳು ನಮ್ಮ ಮಗಳ ಜೊತೆ ಸಲುಗೆಯಿಂದ ನಡೆದುಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಪೋಷಕರು ಆರೋಪಿಸಿದ್ದಾರೆ.
ಈ ಸಂಬಂಧ ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಹಿನ್ನೆಲೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳ ಪೋಷಕರು ಶಿವಮೊಗ್ಗದಲ್ಲಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.