ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ದೇವಸ್ಥಾನದಲ್ಲಿ ಮಂಡಲಂ-ಮಕರವಿಳಕ್ಕು ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ದೇಗುಲ ತೆರೆಯಲಾಗಿದ್ದು, ಭಕ್ತರಿಗೆ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭಕ್ತಾದಿಗಳ ನೂಕು ನುಗ್ಗಲು ನಿಯಂತ್ರಿಸಲು ಪೊಲೀಸ್ ಪಡೆ ನಿಯೋಜಿಸಲಾಗಿದೆ. ಇಂದು ಮುಂಜಾನೆ ದೇಗುಲ ತೆರೆಯುವ ಮುನ್ನವೇ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಇಂದು ಮುಂಜಾನೆ 30,000ಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದಾರೆ ಎಂದು ಎಡಿಜಿಪಿ ಎಸ್.ಶ್ರೀಜಿತ್ ತಿಳಿಸಿದ್ದಾರೆ.
ಮಲಯಾಳಂ ಕ್ಯಾಲೆಂಡರ್ ಪ್ರಕಾರ ದೇಗುಲದಲ್ಲಿ 41 ದಿನ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ನಡೆಯಲಿದೆ. ಶುಕ್ರವಾರ ಸಂಜೆ 4 ಗಂಟೆಗೆ ದೇವಸ್ಥಾನದ ಅರ್ಚಕರು ಕಂದರಾರು ರಾಜೀವ್ ಹಾಗೂ ಕಂದರಾರು ಬ್ರಹ್ಮದತ್ತ ಸಮ್ಮುಖದಲ್ಲಿ ಪ್ರಧಾನ ಅರ್ಚಕರಾದ ಪಿ.ಎನ್.ಮಹೇಶ್ ನಂಬೂತಿರಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ದೇಗುಲದ ಗರ್ಭಗುಡಿ ಬಾಗಿಲು ತೆರೆದಿದ್ದಾರೆ.
ಪ್ರತಿದಿನ 80 ಸಾವಿರ ಭಕ್ತರಿಗೆ ದೇವರ ದರ್ಶನಕ್ಕೆ ಅವ್ಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.