alex Certify BIG NEWS: ಶೂಟಿಂಗ್​ ವೇಳೆ ನಟ ಶಾರೂಕ್​ ಖಾನ್​ಗೆ ಅಪಘಾತ; ಶಸ್ತ್ರಚಿಕಿತ್ಸೆಗೆ ಒಳಗಾದ ಕಿಂಗ್​ ಖಾನ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೂಟಿಂಗ್​ ವೇಳೆ ನಟ ಶಾರೂಕ್​ ಖಾನ್​ಗೆ ಅಪಘಾತ; ಶಸ್ತ್ರಚಿಕಿತ್ಸೆಗೆ ಒಳಗಾದ ಕಿಂಗ್​ ಖಾನ್​

ಬಾಲಿವುಡ್​ ಸೂಪರ್​ ಸ್ಟಾರ್​ ಶಾರೂಕ್​ಖಾನ್​ ಅಮೆರಿಕದಲ್ಲಿ ಶೂಟಿಂಗ್​ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಶಾರೂಕ್​ಖಾನ್​ ಮೂಗಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ತಮ್ಮ ಮುಂಬರುವ ಸಿನಿಮಾಗಾಗಿ ಲಾಸ್​ ಏಂಜಲೀಸ್​ನಲ್ಲಿ ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ನಟ ಶಾರೂಕ್​ ಖಾನ್​ ಈ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಮಾಧ್ಯಮಗಳ ವರದಿ ಪ್ರಕಾರ ಶಾರೂಕ್​ ಖಾನ್​ ಮೂಗಿಗೆ ಸಣ್ಣ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಹಾಗೂ ಅವರು ಭಾರತಕ್ಕೆ ಮರಳಿದ್ದಾರೆ ಎಂದು ತಿಳಿದು ಬಂದಿದೆ. ಶಾರೂಕ್​ಖಾನ್​ ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್​ಗಾಗಿ ಲಾಸ್​ ಏಂಜಲೀಸ್​ನಲ್ಲಿ ಶೂಟಿಂಗ್​ ನಡೆಸುತ್ತಿದ್ದರು. ಈ ವೇಳೆ ಅವರ ಮೂಗಿಗೆ ಬಲವಾಗಿ ಪೆಟ್ಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತಸ್ರಾವವನ್ನು ನಿಲ್ಲಿಸಲು ಕಿಂಗ್​ ಖಾನ್ ಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಪಠಾಣ್​ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಇದೀಗ ಶಾರೂಕ್​ ಖಾನ್​ ಜವಾನ್​ ಸಿನಿಮಾದ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಜುಲೈ 12ರಂದು ಥಿಯೇಟರ್​ಗಳಲ್ಲಿ ಟಾಮ್ ಕ್ರೂಸ್​ ಅಭಿನಯದ ಮಿಷನ್​ ಇಂಪಾಸಿಬಲ್​ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೇ ವೇಳೆ ಬಹುನಿರೀಕ್ಷಿತ ಜವಾನ್​ ಸಿನಿಮಾದ ಟ್ರೈಲರ್​ ಕೂಡ ರಿಲೀಸ್​ ಆಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...