alex Certify ರಷ್ಯಾ ಸೇರಿದಂತೆ CIS ದೇಶದ 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ ಶಾರುಖ್ ಖಾನ್ ಸೂಪರ್ ಹಿಟ್ ಚಿತ್ರ ‘ಪಠಾಣ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಷ್ಯಾ ಸೇರಿದಂತೆ CIS ದೇಶದ 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ ಶಾರುಖ್ ಖಾನ್ ಸೂಪರ್ ಹಿಟ್ ಚಿತ್ರ ‘ಪಠಾಣ್’

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಅವರ ಬ್ಲಾಕ್‌ಬಸ್ಟರ್ ಪತ್ತೇದಾರಿ ಸಿನಿಮಾ ಪಠಾಣ್ ರಷ್ಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ (ಸಿಐಎಸ್) ದೇಶದಾದ್ಯಂತ 3 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಜುಲೈ 13 ರಿಂದ ರಷ್ಯಾ ಮತ್ತು ಕಾಮನ್‌ವೆಲ್ತ್ ಆಫ್ ಇಂಡಿಪೆಂಡೆಂಟ್ ಸ್ಟೇಟ್ಸ್ ಗಳಾದ ಅರ್ಮೇನಿಯಾ, ಅಜೆರ್ಬೈಜಾನ್, ಬೆಲಾರಸ್, ಜಾರ್ಜಿಯಾ, ಕಜಕಿಸ್ತಾನ್, ಕಿರ್ಗಿಸ್ತಾನ್ ಮತ್ತು ಉಜ್ಬೇಕಿಸ್ತಾನ್ ನಲ್ಲಿ ಬಿಡುಗಡೆಯಾಗಲಿದೆ.

ಯಶ್ ರಾಜ್ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಸಿನಿಮಾ ಜನವರಿ 25 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಬಳಿಕ 1,000 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿದೆ.

ಈ ಚಲನಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದು ಜಾನ್ ಅಬ್ರಹಾಂ , ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿದ್ದಾರೆ.
“YRF ನ ಐತಿಹಾಸಿಕ ಬ್ಲಾಕ್‌ಬಸ್ಟರ್ ಪಠಾಣ್ ಮತ್ತೊಂದು ದಾಖಲೆಯನ್ನು ಸೃಷ್ಟಿಸಿದೆ. ರಷ್ಯಾ ಮತ್ತು ಸಿಐಎಸ್‌ನಾದ್ಯಂತ ಡಬ್ಬಿಂಗ್ ಆವೃತ್ತಿಯಲ್ಲಿ ಭಾರತೀಯ ಚಲನಚಿತ್ರವಾಗಿ ವ್ಯಾಪಕವಾಗಿ ಬಿಡುಗಡೆಯಾಗುತ್ತಿದೆ. ಜುಲೈ 13 ರಂದು ಈ ಪ್ರದೇಶದಲ್ಲಿ 3000+ ಪರದೆಗಳಲ್ಲಿ ಬಿಡುಗಡೆಯಾಗಲಿದೆ” ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಕಾಲ ಪ್ರಮುಖ ಪಾತ್ರಗಳಲ್ಲಿ ನಟಿಸದ ಶಾರುಖ್‌ ಖಾನ್ ಪಠಾಣ್ ಮೂಲಕ ಮೆಗಾ ಕಮ್ ಬ್ಯಾಕ್ ಮಾಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...