ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಆಮ್ಲಜನಕದ ಕೊರತೆಯಿಂದ ಇವತ್ತು 6 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನದ ಅವಧಿಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಬರೋಬ್ಬರಿ 16 ರೋಗಿಗಳು ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಆಕ್ಸಿಜನ್ ಅಗತ್ಯವಿರುವ ರೋಗಿಗಳ ಸಂಖ್ಯೆ ಕೂಡ ಏರಿಕೆಯಾಗಿದೆ. ಹೆಚ್ಚಿನವರಿಗೆ ಬೆಡ್ ಸಿಗುತ್ತಿಲ್ಲ. ಆಕ್ಸಿಜನ್ ಕೊರತೆ ಕಂಡುಬಂದಿದೆ. ಶಹದೋಲ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿನ ಸಂಖ್ಯೆ ಏರಿಕೆಯಾಗತೊಡಗಿದೆ. ಶನಿವಾರ ರಾತ್ರಿ ಹಠಾತ್ತನೆ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿದ್ದು, ಆಮ್ಲಜನಕ ಪೂರೈಕೆ ಹಾಸಿಗೆಯಲ್ಲಿ ಇದ್ದ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.