ಬೆಂಗಳೂರು: ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ.2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ. ಶಕ್ತಿ ಯೋಜನೆಯಿಂದ ಎಲ್ಲ ಮಹಿಳೆಯರೂ ಖುಷಿಯಾಗಿದ್ದಾರೆ ಎಂದು ಸಿಎಂ ಸಿದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದುವರೆಗೆ ಶಕ್ತಿ ಯೋಜನೆಯ ಮೂಲಕ ಉಚಿತವಾಗಿ 18 ಕೋಟಿ ಮಹಿಳೆಯರು ಬಸ್ ನಲ್ಲಿ ಪ್ರಯಾಣಿಸಿದ್ದಾರೆ. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ, ಪುರುಷರಿಗೆ ತೊಂದರೆಯಾಗುತ್ತಿದೆ ಎಂದು ಬಿಜೆಪಿಯವರು ಟೀಕಿಸಿದ್ದಾರೆ. ಸರ್ಕಾರದ ಯೋಜನೆ ವಿರೋಧಿಸಬೇಕು ಎಂದು ಅನಗತ್ಯವಾಗಿ ವಿರೋಧಿಸುವುದಲ್ಲ, ಶಕ್ತಿ ಯೋಜನೆಯ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಮುಖ್ಯಮಮ್ತ್ರಿಗಳ ಹೆಸರಲ್ಲಿ ಅರ್ಚನೆ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 13 ಸಾವಿರ ಜನ ಕಂಡಕ್ಟರ್, ಸಾರಿಗೆ ಸಿಬ್ಬಂದಿ ನೇಮಕ ಮಾಡಲು ನಿರ್ಧರಿಸಿದ್ದೇವೆ. 4000 ಬಸ್ ಖರೀದಿಸಲು ಸರ್ಕಾರ ತೀರ್ಮಾನಿಸಿದೆ ಎಂದರು.
ಮಹಿಳೆಯರ ಉಚಿತ ಬಸ್ ಪ್ರಯಾಣದಿಂದಾಗಿ ಧಾರ್ಮಿಕ, ಪ್ರೇಕ್ಷಣಿಯ ಸ್ಥಳಗಳಿಗೆ ಜನರ ಭೇಟಿ ಹೆಚ್ಚಾಗುತ್ತದೆ ಇದರಿಂದ ಪ್ರವಾಸೋದ್ಯಮ, ಉದ್ಯೋಗ ಹೆಚ್ಚಾಗುತ್ತಿದೆ. ಒಂದು ದಿನಕ್ಕೆ 49.6 ಲಕ್ಷ ಪ್ರಯಾಣಿಸುತ್ತಿದ್ದಾರೆ. 28 ಕೋಟಿ 94 ಲಕ್ಷ , 4.72 ಕೋಟಿ ರೂ. ದಿನಕ್ಕೆ ಆದಾಯ ಜಾಸ್ತಿಯಾಗಿದೆ ಎಂದು ಹೇಳಿದರು.
ಮಹಿಳೆಯರೂ ಆರ್ಥಿಕ ಚಟುವಟಿಕೆಯಲ್ಲಿ ಭಾಗವಾಗಬೇಕು. ಮಹಿಳೆಯರಿಗೆ, ಬಡವರಿಗೆ ಆರ್ಥಿಕ ಸಬಲತೆ ತರುವ ಉದ್ದೇಶಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆ ಬಹಳ ಯಶಸ್ವಿಯಾಗಿ ಜಾರಿಯಾಗುತ್ತಿದೆ. ಕೆಎಸ್ ಆರ್ ಟಿಸಿ ಯೂ ಕೂಡ ಸುಧಾರಿಸುತ್ತಿದೆ ಎಂದು ತಿಳಿಸಿದರು.