![](https://kannadadunia.com/wp-content/uploads/2023/11/Shakthi-yojana.jpg)
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ಯಶಸ್ಸು ಕಂಡಿದ್ದು, ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ 248 ಕೋಟಿ ಮಹಿಳಾ ಪ್ರಯಾಣಿಕರು ಉಚಿ ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆ ಆರಂಭವಾಗಿ ಎಂಟು ತಿಂಗಳಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಗಳಲ್ಲಿ 248 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಬೆಳೆಸಿದ್ದು, ಎರಡ್ಮೂರು ದಿನಗಳಲ್ಲಿ ಈ ಸಂಖ್ಯೆ 250 ತಲುಪಲಿದೆ.
ರಾಜ್ಯದಲ್ಲಿ ಜನವರಿ 26 ರವರೆಗೆ 248. 36 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆದಿದ್ದಾರೆ. ಪ್ರತಿದಿನ ಸರಾಸರಿ 60ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 3,372 ಕೋಟಿ ರೂ.ಗೆ ತಲುಪಿದೆ