ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ‘ಶಕ್ತಿ ಯೋಜನೆ’ ಜಾರಿಯಾಗಿ 3 ತಿಂಗಳು ಪೂರೈಸಿದೆ.
ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ನಿರೀಕ್ಷೆಗೂ ಮೀರಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಗಳಲ್ಲಿ ಇದುವರೆಗೆ 13.20 ಕೋಟಿ ಮಹಿಳೆಯರು ಶೂನ್ಯ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.
ಈವರೆಗೆ ಶೂನ್ಯ ಟಿಕೆಟ್ ಮೊತ್ತ 332.77 ಕೋಟಿ ರೂಪಾಯಿ ಆಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಮೂರು ತಿಂಗಳಲ್ಲಿ ಉಚಿತ ಪ್ರಯಾಣ ಮಾಡಿದ ಶೂನ್ಯ ಟಿಕೆಟ್ ಗಳ ಸಂಖ್ಯೆ 13,20,53,266. ಉಚಿತ ಪ್ರಯಾಣದ ಟಿಕೆಟ್ ಮೊತ್ತ 332,77,03,789 ರೂಗಳಾಗಿವೆ.