ಬೆಂಗಳೂರು: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಿರುವ ಬೆನ್ನಲ್ಲೇ ಬಸ್ ಗಳಲ್ಲಿ ಜನವೋ ಜನ… ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಬಸ್ ಹತ್ತಲು ಪರದಾಡುವ ಸ್ಥಿತಿಯಿದೆ. ಕಾಲಿಡಲೂ ಜಾಗವಿಲ್ಲದಷ್ಟು ರಶ್ ಆಗಿ ಬಸ್ ಗಳು ಸಂಚರಿಸುತ್ತಿವೆ… ಪ್ರಯಾಣಿಕರಿಗೆ ಸುಗಮ ಸಂಚಾರಕ್ಕಾಗಿ ಇದೀಗ ರಾಜ್ಯ ಸರ್ಕಾರ ಹೊಸ ಬಸ್ ಖರೀದಿಗೆ ಹಣ ಬಿಡುಗಡೆ ಮಾಡಿದೆ.
ರಸ್ತೆ ಸಾರಿಗೆ ಸುಗಮಗೊಳಿಸುವ ನಿಟ್ಟಿನಲ್ಲಿ ಹೊಸ ಬಸ್ ಗಳ ಖರೀದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಬರೋಬ್ಬರಿ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ 500 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ನೂತನ ಬಸ್ ಖರೀದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮಗಳಿಗೆ ಸೂಚನೆ ನೀಡಲಾಗಿದೆ.