ಬೆಂಗಳೂರು : ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಜೂನ್-2023ರ ಮಾಹೆಯಲ್ಲಿ ಉಚಿತವಾಗಿ ಪ್ರಯಾಣಿಸಿರುವ ಪ್ರಯಾಣ ವೆಚ್ಚದ ಮರುಪಾವತಿಗಾಗಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ರಾಜ್ಯ ಸರ್ಕಾರವು 125. 48 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಸರ್ಕಾರದ ಆದೇಶದಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬೆಂ.ಮ.ಸಾ.ಸಂಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ), ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ (Express) ಬಸ್ಸುಗಳಲ್ಲಿ ಕರ್ನಾಟಕ ರಾಜ್ಯದ (Domicile of Karnataka) ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ಯ, ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಲು ದಿನಾಂಕ:11.06.2023ರಿಂದ ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಇವರು ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಪ್ರಯಾಣಿಸಿದ ಕರ್ನಾಟಕದ ನಿವಾಸಿ ಮಹಿಳೆಯರಿಗೆ ಶೂನ್ಯ ಟಿಕೇಟ್ ವಿತರಿಸಿದ್ದು, ಅದರಂತ ದಿನಾಂಕ:11.06.2023 ರಿಂದ (ಮಧ್ಯಾಹ್ನ 1.00 ಗಂಟೆಯಿಂದ) ದಿನಾಂಕ:30.06.2023 ರವರೆಗೆ ನಾಲ್ಕು ನಿಗಮಗಳ ಬಸ್ಸುಗಳಲ್ಲಿ ರಾಜ್ಯದ ಮಹಿಳಯರಿಗೆ ಉಚಿತ ಪ್ರಯಾಣ ಸೌಲಭ ನೀಡಲಾಗಿದೆ.
ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು ಉಚಿತವಾಗಿ ದಿನಾಂಕ:11.06.2023 ರಿಂದ (ಮಧ್ಯಾಹ್ನ 1.00 ಗಂಟೆಯಿಂದ) ದಿನಾಂಕ:30.06.2023ರ ಅಂತ್ಯದವರೆಗೆ ಪ್ರಯಾಣಿಸಲು ವಿತರಿಸಿದ ಶೂನ್ಯ ಟಿಕೇಟ್‌ಗಳ ವೆಚ್ಚದ ಮರುಪಾವತಿಗಾಗಿ ಸಾರಿಗೆ ನಿಗಮಗಳ ಹಿತದೃಷ್ಟಿಯಿಂದ ಟಿಕೆಟ್ ಆಧಾರದ ಮೇಲೆ ರೂ.12548.21 ಲಕ್ಷಗಳನ್ನು (ಹನ್ನೆರಡು ಸಾವಿರದ ಐನೂರ ನಲವತ್ತೆಂಟು ಲಕ್ಷದ ಇಪ್ಪತ್ತೊಂದು ಸಾವಿರ ರೂಪಾಯಿಗಳು ಮಾತ್ರ) ಈ ಕೆಳಕಂಡಂತೆ ನಿಗಮವಾರು ಬಿಡುಗಡೆಗೊಳಿಸಿ ಆದೇಶಿಸಿದೆ.