ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗಾಗಿ ಆರಂಭವಾಗಿರುವ ಶಕ್ತಿ ಯೋಜನೆಯನ್ನು ದುರುಪಯೋಗ ಪಡಿಸಿಕೊಂಡಿರುವ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಬಸ್ ನಿರ್ವಾಹಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಹೆಚ್ಚು ಟಿಕೆಟ್ ನೀಡಿ ಕಂಡಕ್ಟರ್ ಗಳು ಹಣವನ್ನು ತಾವೇ ಗುಳುಂ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಟಿಕೆಟ್ ಬರೆಯುವುದು, ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೆಲಸ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದ್ದು, ಅಂತಹ ನಿರ್ವಾಹಕರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಬಸ್ ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಂತಹ ತಪ್ಪು ಮಾಡುವ ಕಂಡಕ್ಟರ್ ಗಳ ವಿರುದ್ಧ ಸಾರಿಗೆ ಇಲಾಖೆ ಕ್ರಮಕ್ಕೆ ಮುಂದಾಗಿದೆ.
ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22ರ ಅಡಿಯಲ್ಲಿ ಕಂಡಕ್ಟರ್ ಗಳ ವಿರುದ್ಧ ಶಿಸ್ತುಕ್ರಮ. ಟಿಕೆಟ್ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ, ಟಿಕೆ ನೀಡದೇ ಇದ್ದಲ್ಲಿ ನಿಯಮಾನುಸಾರ ಕ್ರಮ, ಪ್ರಕರಣದಲ್ಲಿ ಪ್ರಯಾಣಿಕರಿಂದ ದಂದವಸೂಲಿ ಮಾಡದೇ ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮ ಕೈಗೊಳ್ಳಲು ಮುಂದಾಗಿದೆ.