
ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆಯಿಂದ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ಪಡೆಯಲು ನೀಡಿದ್ದ ಗಡುವನ್ನು ಮೂರು ತಿಂಗಳಿಂದ ಆರು ತಿಂಗಳಿಗೆ ವಿಸ್ತರಣೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಲು ನೀಡಿದ್ದ ಗಡುವನ್ನು ಆರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸ್ಮಾರ್ಡ್ ಕಾರ್ಡ್ ವಿತರಣೆ ವೇಳೆ ಫಲಾನುಭವಿಗಳಿಂದ ಪ್ರತಿ ಕಾರ್ಡಿಗೆ 14.16 ರೂ. ಸೇವಾ ಶುಲ್ಕ ನಿಗದಿಪಡಿಸಲು ನಿರ್ಧರಿಸಲಾಗಿದೆ. ಆದರೆ, ಈ ಬಗ್ಗೆ ಸಾರ್ವಜನಿಕರಿಂದ ಸ್ಮಾರ್ಟ್ ಕಾರ್ಡ್ ಶುಲ್ಕ ಸಂಗ್ರಹಿಸುವುದಿಲ್ಲ. ಇದು ಇಲಾಖೆ ಲೆಕ್ಕಾಚಾರಕ್ಕೆ ಮಾತ್ರ ನಿಗದಿ ಮಾಡಿದ ಬೆಲೆ ಎಂದು ಸ್ಪಷ್ಟಪಡಿಸಿದ್ದಾರೆ.