alex Certify BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ: ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಗಣ್ಯರು ವಿಧಾನಸೌಧ ಎದುರು ನಡೆದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಐವರು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ. ಸುಮಿತ್ರಾ, ರಾಧಾ, ಪ್ರೇಮಾ, ಕಲಾವತಿ, ಪವಿತ್ರಾ ಅವರಿಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...