ಕಾರವಾರ: ಶಾಲ್ಮಲಾ ನದಿಯಲ್ಲಿ ಈಜಲು ಹೋಗಿ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೀಮನಗುಂಡಿಯಲ್ಲಿ ನಡೆದಿದೆ.
ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ಓರ್ವ ನೀರುಪಾಲಾಗುತ್ತಿದ್ದ. ಆತನನ್ನು ರಕ್ಷಿಸಲು ಹೋಗಿ ಐವರೂ ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.
ನೀರುಪಾಲಾಗಿರುವ ಐವರಲ್ಲಿ ಓರ್ವನ ಶವ ಪತ್ತೆಯಾಗಿದೆ. ಉಳಿದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಶಿರಸಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.