ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಹೆಣ್ಣು ಕುಟುಂಬದ ಕಣ್ಣು ಶಾಸಕ ಶಾಮನೂರು ಹೇಳಿಕೆ ಖಂಡನೀಯ. ಶಿವಶಂಕರಪ್ಪನವರಿಗೆ ವಯಸ್ಸಾಗಿದೆ. ಏನೋ ಲೆಕ್ಕಾಚಾರದಲ್ಲಿ ಮಾತನಾಡಿದ್ದಾರೆ. ಆರು ಮಂದಿ ಹೆಣ್ಣು ಮಕ್ಕಳಿಗೆ ನಾವು ಟಿಕೆಟ್ ನೀಡಿದ್ದೇವೆ. ಭವಿಷ್ಯದ ಕಾರಣದಿಂದ ಹೊಸಮುಖಗಳಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದ್ದಾರೆ.