ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯಿತ ಶಾಸಕರು ಗೆದ್ದರೆ ವೀರಶೈವ ಲಿಂಗಾಯಿತರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಹುದ್ದೆ ರೇಸ್ ನಲ್ಲಿ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ ಅವರು ಕೂಡ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಸಮುದಾಯಕ್ಕೆ 70 ಟಿಕೆಟ್ ನೀಡಲು ಹೈಕಮಾಂಡ್ ಗೆ ಮನವಿ ಮಾಡಿದ್ದು, ಅವರೆಲ್ಲರಿಗೂ ಟಿಕೆಟ್ ದೊರೆತು ಜಯಗಳಿಸಿದ್ದಲ್ಲಿ ಮುಂದಿನ ಮುಖ್ಯಮಂತ್ರಿ ವೀರಶೈವ ಲಿಂಗಾಯಿತರಾಗಿರುತ್ತಾರೆ. ನಾನು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷನಾಗಿ ಸಮುದಾಯದವರ ಹಿತ ಕಾಪಾಡಬೇಕು. ಮುಖ್ಯಮಂತ್ರಿ ಯಾರು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.