![](https://kannadadunia.com/wp-content/uploads/2019/03/shamanuru-ss.jpg)
ದಾವಣಗೆರೆ: ಕಾಂಗ್ರೆಸ್ ಸರ್ಕಾರದಲ್ಲಿ ವೀರಶೈವ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಮನೂರು ಅವರ ಹೇಳಿಕೆ ಸರ್ಕಾರದಲ್ಲಿ ಸಂಚಲನ ಸೃಷ್ಟಿಸಿದೆ.
ಈ ಬಗ್ಗೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಸರ್ಕಾರದಲ್ಲಿ ನಮ್ಮ ಸಮುದಾಯದ ಅಧಿಕಾರಿಗಳನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವೀರಶೈವಮಹಾಸಭಾದ ಕಾರ್ಯಕ್ರಮದಲ್ಲಿ ನಾನು ನೀಡಿದ ಹೇಳಿಕೆಗೆ ಬದ್ಧನಾಗಿದ್ದೇನೆ. ಇರತಕ್ಕಂತ ಸತ್ಯ ಹೇಳಿದ್ದೇನೆ. ನಮ್ಮ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ. ಈ ಬಗ್ಗೆ ನಾನು ಯಾವ ಮಂತ್ರಿಗಳನ್ನು ಕೇಳಲು ಹೋಗಿಲ್ಲ. ಅಧಿಕಾರಿಗಳಿಗೆ ನೋವಾಗಿದೆ ಎಂದಿದ್ದೇನೆ. ಆದರೆ ಸಚಿವರ ಬಗ್ಗೆ ನಾನು ಏನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.