ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ ಮಾಡಲಾಗಿದೆ. ಶೀಘ್ರ ಕಾಲ್ ಸೆಂಟರ್ ಕೂಡ ಆರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದ್ದಾರೆ.
ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಸಮನ್ವಯ ಸಾಧಿಸಲು ಕಾರ್ಖಾನೆಗಳು ನಡೆಸುವ ವ್ಯವಹಾರಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಸಕ್ಕರೆ ಇಲಾಖೆಯಲ್ಲಿ ಮಾಹಿತಿ ಸಂಗ್ರಹಿಸಿ ರೈತರಿಗೆ ಅನುಕೂಲವಾಗುವಂತೆ ಹೊಸ ಆಪ್ ಬಿಡುಗಡೆ ಮಾಡಲಾಗಿದೆ.
ಸಕ್ಕರೆ ಕಾರ್ಖಾನೆಗಳಿಂದ ಪಾವತಿಸುವ ಕಬ್ಬಿನ ಬಿಲ್, ಸಕ್ಕರೆ ಇಳುವರಿ, ಬೆಳೆಗಾರರಿಗೆ ಪಾವತಿಸುವ ಕಬ್ಬಿನ ಬಿಲ್ ಬಾಕಿ, ಇರುವ ಮೊತ್ತ, ಕಬ್ಬು ಬೆಳೆಯುವ ಪ್ರದೇಶ, ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಮತ್ತು ಇತರೆ ಉಪ ಉತ್ಪನ್ನಗಳಿಂದ ಬರುವ ಆದಾಯ, ಆದಾಯದ ಹಂಚಿಕೆ ವಿವರ, ಸಕ್ಕರೆ ಮತ್ತು ಕಾಕಂಬಿ ದಾಸ್ತಾನು ಮೊದಲಾದ ವಿವರಗಳನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಆಪ್ ಮತ್ತು ಸಾಫ್ಟ್ವೇರ್ ಬಿಡುಗಡೆ ಮಾಡಲಾಗಿದೆ ಎಂದರು.