ಮುಂಬೈ: ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಅನಾರೋಗ್ಯದ ಕಾರಣ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಪಿತ್ತಕೋಶದಲ್ಲಿ ಸಮಸ್ಯೆ ಕಂಡುಬಂದಿದ್ದು, ನಾಳೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು.
ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆ ಗೆ ಶರದ್ ಪವಾರ್ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ಪರೀಕ್ಷೆಯ ವೇಳೆ ಪಿತ್ತಕೋಶದಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ. ಅವರು ರಕ್ತದ ಸಮಸ್ಯೆ ಕಾರಣಕ್ಕೆ ಔಷಧವನ್ನು ತೆಗೆದುಕೊಳ್ಳುತ್ತಿದ್ದು, ಅದನ್ನು ನಿಲ್ಲಿಸಲಾಗಿದೆ. ಅವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ನಾಳೆ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎನ್.ಸಿ.ಪಿ. ವಕ್ತಾರ ನವಾಬ್ ಮಲಿಕ್ ಮಾಹಿತಿ ನೀಡಿದ್ದು, ಪಿತ್ತಶೋಶ ಸಮಸ್ಯೆ ಕಾರಣ ಶರದ್ ಪವಾರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದ್ದಾರೆ.