alex Certify ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವರ ಹಸ್ತಕ್ಷೇಪದಿಂದ ನೀಡಿದ್ದ ಅನುದಾನಕ್ಕೆ ತಡೆ: ಶಾಸಕ ಶರತ್ ಆಕ್ರೋಶ; ಗಾಂಧಿ ಪ್ರತಿಮೆ ಎದುರು ಧರಣಿ

ಬೆಂಗಳೂರು: ಶಾಸಕ ಶರತ್ ಬಚ್ಚೇಗೌಡ ಅವರಿಗೆ ನೀಡಿದ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ. ಅನುದಾನಕ್ಕೆ ತಡೆ ನೀಡಿರುವುದಕ್ಕೆ ಶಾಸಕ ಶರತ್ ಆಕ್ರೋಶ ವ್ಯಕ್ತಪಡಿಸಿದ್ದು, ಏಕಾಂಗಿಯಾಗಿ ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಧರಣಿ ಕೈಗೊಂಡಿದ್ದಾರೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 27 ರಸ್ತೆ ಕಾಮಗಾರಿಗಳಿಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಅನುದಾನ ಬಿಡುಗಡೆಗೆ ಸಹಿ ಹಾಕಿದ ನಂತರ ಅನುದಾನಕ್ಕೆ ತಡೆ ನೀಡಿದ ಆರೋಪ ಕೇಳಿ ಬಂದಿದೆ.

ಸಚಿವ ಎಂಟಿಬಿ ನಾಗರಾಜ್ ಹಸ್ತಕ್ಷೇಪದಿಂದ ಹಣ ಬಿಡುಗಡೆ ಮಾಡದ ಆರೋಪ ಕೇಳಿ ಬಂದಿದೆ. ಹಣ ಬಿಡುಗಡೆಗೆ ಒತ್ತಾಯಿಸಿ ಶಾಸಕ ಶರತ್ ಬಚ್ಚೇಗೌಡ ಪ್ರತಿಭಟನೆ ಕೈಗೊಂಡಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಹೊಸಕೋಟೆ ಕ್ಷೇತ್ರಕ್ಕೆ ತಾರತಮ್ಯ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...