ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮುಖರ್ಜಿ ಕುಟುಂಬದಿಂದ ಕಾಂಗ್ರೆಸ್ ತೊರೆದ ಕೊನೆಯ ನಾಯಕಿ ಎನಿಸಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಶರ್ಮಿಷ್ಠಾ ರಾಜಕೀಯ ಜೀವನದಿಂದ ನಿವೃತ್ತಿ ಘೋಷಿಸುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ತಾವು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯರಾಗಿ ಉಳಿಯುತ್ತೇನೆ ಎಂದು ಹೇಳಿದ್ದಾರೆ.
ಎಲ್ಲರಿಗೂ ಧನ್ಯವಾದಗಳು. ಆದರೆ ಇನ್ಮುಂದೆ ನಾನು ರಾಜಕಾರಣಿಯಲ್ಲ. ನಾನು ರಾಜಕಾರಣಕ್ಕೆ ವಿದಾಯ ಘೋಷಿಸಿದ್ದೇನೆ. ಆದರೆ ನಾನು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯೆಯಾಗಿ ಮುಂದುವರಿಯುತ್ತೇನೆ. ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಇರುವುದಿಲ್ಲ. ದೇಶ ಸೇವೆ ಮಾಡಲು ಸಾಕಷ್ಟು ಮಾರ್ಗಗಳಿವೆ ಎಂದು ಟ್ವೀಟಾಯಿಸಿದ್ದಾರೆ.
ಇನ್ನು ಈ ವಿಚಾರವಾಗಿ ಮಾತನಾಡಿರುವ ಶರ್ಮಿಷ್ಠಾ ತಾವು ರಾಜಕಾರಣಕ್ಕೆ ಸೂಕ್ತವಾದವರಲ್ಲ ಎನಿಸತೊಡಗಿತು. ನಾನು ಯಾವುದನ್ನು ಜಾಸ್ತಿ ಪ್ರೀತಿಸುತ್ತೇನೋ ಆ ಕಡೆಗಳಲ್ಲಿ ಸಮಯ ಕಳೆಯಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಬೇರೆ ಯಾವುದೇ ರಾಜಕೀಯ ಪಕ್ಷ ಸೇರ್ಪಡೆಯನ್ನು ನಿರಾಕರಿಸಿದ್ದಾರೆ.
ಈ ವರ್ಷದ ಜುಲೈ ತಿಂಗಳಲ್ಲಿ ಶರ್ಮಿಷ್ಠಾರ ಸಹೋದರ ಹಾಗೂ ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ ಕಾಂಗ್ರೆಸ್ ತೊರೆದು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಸಹೋದರನ ಈ ನಡೆಗೆ ಟ್ವಿಟರ್ನಲ್ಲಿ ಶರ್ಮಿಷ್ಠಾ ಬೇಸರ ವ್ಯಕ್ತಪಡಿಸಿದ್ದರು.
ಇದಾದ ಬಳಿಕ ಆಗಸ್ಟ್ ತಿಂಗಳಲ್ಲಿ ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಣಬ್ ಮುಖರ್ಜಿ ಅತ್ತಿಗೆ ಸುವ್ರ ಘೋಷ್ ಟಿಎಂಸಿ ಸೇರ್ಪಡೆಯಾಗಿದ್ದರು.
2014ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಶರ್ಮಿಷ್ಠಾ ಒಂದು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ಆದ್ಮಿ ಪಕ್ಷದ ಅಭ್ಯರ್ಥಿ ಸೌರಭ್ ಭಾರದ್ವಾಜ್ ಎದುರು ಸೋತಿದ್ದರು.
2019ರ ಸೆಪ್ಟೆಂಬರ್ನಲ್ಲಿ ಶರ್ಮಿಷ್ಠಾರನ್ನು ಕಾಂಗ್ರೆಸ್ ವಕ್ತಾರೆಯನ್ನಾಗಿ ನೇಮಿಸಲಾಗಿತ್ತು.
https://twitter.com/iamShoaibaly/status/1441652712999895043