ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆ ಮುಂದುವರಿಸಲಿದ್ದು ಬಾಕಿ ಇದ್ದ ಸುಮಾರು 3 ಲಕ್ಷ ಬಾಂಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಭಾಗ್ಯಲಕ್ಷ್ಮಿ ಬಾಂಡ್ ವಿತರಣೆಗೆ ಚಾಲನೆ ನೀಡಲಾಗಿದೆ. ಬಾಕಿ ಇರುವ ಬಾಂಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆ ಮುಂದುವರೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಐಸಿ ಬದಲಿಗೆ ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಗೆ ಭಾಗ್ಯಲಕ್ಷ್ಮಿ ಯೋಜನೆಯನ್ನು ಜೋಡಿಸಲಾಗುತ್ತದೆ. ಇದುವರೆಗೂ 29 ಕೋಟಿ ಫಲಾನುಭವಿಗಳಿಗೆ 5.68 ಕೋಟಿ ರೂಪಾಯಿ ಮೌಲ್ಯದ ಬಾಂಡ್ ಗಳನ್ನು ವಿತರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.