ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸಂಪುಟದಲ್ಲಿ ನಾನೊಬ್ಬಳೇ ಮಹಿಳಾ ಮಂತ್ರಿ ಇರೋದು. ಸಂಘಟನೆಯ ಮೂಲಕ ಸಾಕಷ್ಟು ಕೆಲಸ ಮಾಡಿದ್ದೇನೆ. ರಾಜ್ಯ, ರಾಷ್ಟ್ರ ನಾಯಕರಿಂದಲೇ ಸೂಚನೆಯೂ ಬಂದಿಲ್ಲ. ವರಿಷ್ಠರಿಂದ ಸೂಚನೆ ಬಂದ ನಂತರ ನೋಡೋಣ ಎಂದು ಹೇಳಿದ್ದಾರೆ.
ನಾನು ಸಮರ್ಪಕವಾಗಿ ಕೆಲಸ, ಕಾರ್ಯ ಮಾಡುತ್ತಿದ್ದೇನೆ. ಮಾಧ್ಯಮಗಳಲ್ಲಿ ಮಾತ್ರ ನನ್ನ ಸಚಿವ ಸ್ಥಾನದ ಬಗ್ಗೆ ಪ್ರಸ್ತಾಪವಾಗುತ್ತಿದೆ. ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ಹೇಳಿದ್ದಾರೆ.