alex Certify ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬೆಂಗಳೂರು: ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಡಳಿತ ಮಂಡಳಿಗಳ ಒಕ್ಕೂಟ – ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ರಾತ್ರಿ 9.30 ರ ಸುಮಾರಿಗೆ ಜಾಲಹಳ್ಳಿಯ ಮನೆಗೆ ಆಗಮಿಸಿದ ಶಶಿಕುಮಾರ್ ಕಾರ್ ನ ಡೋರ್ ತೆಗೆದು ಇಳಿಯುವ ಸಂದರ್ಭದಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತಕ್ಷಣವೇ ಶಶಿಕುಮಾರ್ ತಮ್ಮ ಬಳಿಯಿದ್ದ ಗನ್ ತೆಗೆದಾಗ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಶಶಿಕುಮಾರ್ ಕೈ ಮತ್ತು ತೊಡೆ ಭಾಗಕ್ಕೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಾಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...