
ನವದೆಹಲಿ: ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನ ಮೊತ್ತವನ್ನು ಸರ್ಕಾರದಿಂದ ಪರಿಷ್ಕರಣೆ ಮಾಡಲಾಗಿದೆ.
ಪರಮ ವೀರಚಕ್ರ ಪುರಸ್ಕೃತರಿಗೆ 25 ಲಕ್ಷ ರೂಪಾಯಿಯಿಂದ 1.5 ಕೋಟಿ ರೂಪಾಯಿ ಏರಿಕೆ ಮಾಡಲಾಗಿದೆ.
ಮಹಾವೀರ ಚಕ್ರ ಪುರಸ್ಕೃತರಿಗೆ 12 ಲಕ್ಷ ರೂಪಾಯಿಯಿಂದ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ.
ಅಶೋಕ ಚಕ್ರ ಪುರಸ್ಕೃತರಿಗೆ 25 ಲಕ್ಷ ರೂಪಾಯಿಯಿಂದ 1.5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಕೀರ್ತಿಚಕ್ರ ಪುರಸ್ಕೃತರಿಗೆ 12 ಲಕ್ಷ ರೂಪಾಯಿಯಿಂದ 1 ಕೋಟಿ ರೂಪಾಯಿ
ವೀರ ಚಕ್ರ ಪುರಸ್ಕೃತರಿಗೆ 8 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿ
ಶೌರ್ಯ ಚಕ್ರ ಪುರಸ್ಕೃತರಿಗೆ 8 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗೆ ಅನುದಾನ ಹೆಚ್ಚಳ ಮಾಡಲಾಗಿದೆ ಸೇನಾ ಮೆಡಲ್ ಅನುದಾನವನ್ನು 2 ಲಕ್ಷ ರೂ.ನಿಂದ 15 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.