
ಹಾವೇರಿ: ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ, ಒಂದು ಮೇಕೆಯನ್ನು ನೀಡುವ ಯೋಜನೆ ಮುಂದಿನ ತಿಂಗಳಿನಿಂದಲೇ ಜಾರಿಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು. ಕುರಿಗಾರರ ಕುಟುಂಬ ಸ್ವಾವಲಂಬಿ ಜೀವನ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಕುರಿಗಾರರಿಗೆ ತಲಾ 20 ಕುರಿ, ಒಂದು ಮೇಕೆ ನೀಡುವ ಯೋಜನೆ ಮುಂದಿನ ತಿಂಗಳಿಂದ ಜಾರಿಯಾಗಲಿದ್ದು, ಇದಕ್ಕಾಗಿ 324 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.