ಮಂಡ್ಯ : ರೌಡಿ ಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿಯಲ್ಲಿ ನಡೆದಿದೆ.
ಕೊಲೆಯಾದ ರೌಡಿಶೀಟರ್ ನನ್ನು ವಿನಯ್ ಅಲಿಯಾಸ್ ಕುಂಟ (32) ಎಂದು ಗುರುತಿಸಲಾಗಿದೆ, ಈತ ಬೈಕ್ ನಲ್ಲಿ ಹೋಗುತ್ತಿದ್ದಾಗ ಓಮಿನಿ ಕಾರಲ್ಲಿ ಬಂದ ದುಷ್ಕರ್ಮಿಗಳು ಡಿಕ್ಕಿ ಹೊಡೆಸಿ ನಂತರ ಕೆಳಗೆ ಬಿದ್ದ ವಿನಯ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.