ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಂಡ ಹಿನ್ನೆಲೆಯಲ್ಲಿ ನಾಳೆ ಪಾಕ್ ಅಸೆಂಬ್ಲಿಯಲ್ಲಿ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲಾಗುವುದು.
ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ಪಾಕ್ ನ್ಯಾಷನಲ್ ಅಸೆಂಬ್ಲಿಯಲ್ಲಿ ಅವರು ವಿಪಕ್ಷ ನಾಯಕರಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್(ಎನ್) ಪಕ್ಷದ ನಾಯಕರಾಗಿರುವ ಶೆಹಬಾಜ್ ಪ್ರಧಾನಿಯಾಗಲಿದ್ದಾರೆ.
ನಾಳೆ ಹೊಸ ಪ್ರಧಾನಿ ಆಯ್ಕೆ ಮಾಡಲಿರುವ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಪಕ್ಷದ ಅಭ್ಯರ್ಥಿಯಾಗಿ ಖುರೇಶಿ ನಾಮಪತ್ರ ಸಲ್ಲಿಸಿದ್ದಾರೆ. ಇಮ್ರಾನ್ ಖಾನ್ ಪಿಟಿಐ ಪಕ್ಷದಿಂದ ಕಳೆದ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಮೊಹಮ್ಮದ್ ಖುರೇಶಿ ಕಣಕ್ಕಿಳಿದಿದ್ದು, ಖುರೇಶಿ ಮತ್ತು ಶೆಹಬಾಜ್ ನಡುವೆ ಫೈಟ್ ನಡೆಯಲಿದೆ. ಹೊಸ ಪ್ರಧಾನಿಯಾಗಿ ಶೆಹಬಾಜ್ ಆಯ್ಕೆಯಾಗುವ ಸಾಧ್ಯತೆಯಿದೆ. ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಬಿಲಾವಲ್ ಭುಟ್ಟೋ ಅವರಿಗೆ ವಿದೇಶಾಂಗ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.