ಕಲ್ಕತ್ತಾ: ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಉಚ್ಛಾಟಿತ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರನ್ನು ಕಲ್ಕತ್ತಾ ಹೈಕೋರ್ಟ್ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ಹಸ್ತಾಂತರಿಸಲಾಗಿದೆ.
ಇಂದು ಮುಂಜಾನೆ ಹೈಕೋರ್ಟ್ ಪಶ್ಚಿಮ ಬಂಗಾಳ ಸಿಐಡಿಗೆ ನಿಂದನೆ ನೋಟಿಸ್ ಜಾರಿಗೊಳಿಸಿತು. ಷಹಜಹಾನ್‌ನನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ಬಗ್ಗೆ ಎರಡು ವಾರಗಳಲ್ಲಿ ಉತ್ತರಿಸುವಂತೆ ತಿಳಿಸಿದೆ.
ಬುಧವಾರ ಸಂಜೆ 4.30ರೊಳಗೆ ಆರೋಪಿ ಶೇಖ್ ಷಹಜಹಾನ್ ಕಸ್ಟಡಿಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಹೈಕೋರ್ಟ್ ಹೇಳಿದೆ.
ಸಂಪೂರ್ಣ ಪಕ್ಷಪಾತ ನಡತೆಗಾಗಿ ಪಶ್ಚಿಮ ಬಂಗಾಳ ಪೊಲೀಸರನ್ನು ಹೈಕೋರ್ಟ್ ಕಟುವಾಗಿ ಟೀಕಿಸಿತು ಮತ್ತು ಆರೋಪಿಗಳನ್ನು “ರಕ್ಷಿಸಲು” ತನಿಖೆಯನ್ನು ವಿಳಂಬಗೊಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದೆ.