
ದುಬೈನ ರಾಜಕುಮಾರಿ ಶೇಖಾ ಮಹರಾ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಶೇಖಾ ಮಹರಾ ಬಿಂತ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತನ್ನ ಪತಿ ಶೇಖ್ ಮನಾ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತೌಮ್ ರಿಗೆ ವಿಚ್ಛೇದನ ನೀಡಿದ್ದಾರೆ. ಶೇಖಾ ಮಹರಾ, ಇನ್ಸ್ಟಾಗ್ರಾಮ್‌ನಲ್ಲಿ ವಿಚ್ಛೇದನವನ್ನು ಸಾರ್ವಜನಿಕವಾಗಿ ಘೋಷಿಸಿದ್ದಾರೆ.
ಶೇಖಾ ಮಹರಾ, ತನ್ನ ಮೊದಲ ಮಗುವಿಗೆ ಜನ್ಮ ನೀಡಿದ ಎರಡು ತಿಂಗಳ ಮೊದಲೇ ಈ ನಿರ್ಧಾರಕ್ಕೆ ಬಂದಿದ್ದಾರೆ. ಶೇಖಾ ಮೆಹರಾ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರನ ಮಗಳು.
ಪ್ರೀತಿಯ ಪತಿ, ನೀವು ನಿಮ್ಮ ಇನ್ನಿತರ ಪಾಲುದಾರರ ಜೊತೆ ಬ್ಯುಸಿಯಾಗಿರುವ ಕಾರಣ ನಾನು ನಿಮಗೆ ವಿಚ್ಛೇದನ ನೀಡುತ್ತಿದ್ದೇನೆ. ನಾನು ನಿಮಗೆ ವಿಚ್ಛೇದನ ನೀಡುತ್ತೇನೆ. ನಾನು ನಿಮಗೆ ವಿಚ್ಛೇದನ ನೀಡುತ್ತೇನೆ ಮತ್ತು ನಾನು ನಿಮಗೆ ವಿಚ್ಛೇದನ ನೀಡುತ್ತೇನೆ. ನಿಮ್ಮ ಬಗ್ಗೆ ಕಾಳಜಿ ವಹಿಸಿ. ನಿಮ್ಮ ಮಾಜಿ ಪತಿ ಎಂದು ಶೇಖಾ ಮೆಹರಾ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ ಈ ಸುದ್ದಿ ವೈರಲ್ ಆಗಿದೆ. ಇಬ್ಬರು ಪರಸ್ಪರ ಅನ್ ಫಾಲೋ ಮಾಡಿದ್ದು, ಒಟ್ಟಿಗಿರುವ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಶೇಖಾ ಮೆಹರಾ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು.