
ಯಾದಗಿರಿ: ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನಲ್ಲಿ ಸೋಮವಾರ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.
ರಾಂಪುರ ಗ್ರಾಮದಲ್ಲಿ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದಪ್ಪ(55) ಮೃತಪಟ್ಟ ದುರ್ದೈವಿ ಎಂದು ಹೇಳಲಾಗಿದೆ. ಅವರು ತಮ್ಮ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡಿದ್ದ ಭಾಗಕ್ಕೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಚಂದಪ್ಪ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.