ಹಾವೇರಿ: ಮೂರು ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2.68 ಲಕ್ಷ ರು ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸವಣೂರಿನ ಸುಭಾಷ್ ಗಡ್ಡೆಪ್ಪನವರ್ ಎಂಬುವವರ ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿತ್ತು. ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಈ ಹಣ ಸಂಗ್ರಹಿಸಲಾಗಿದೆ ಎಂದು ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದರು.
ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿದ್ದ ಒಟ್ಟು 2.68 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಸುಭಾಷ್ ಗಡ್ಡೆಪ್ಪನವರ್ ವಿರುದ್ಧ ಎನ್ ಸಿಆರ್ ದಾಖಲಿಸಲಾಗಿದೆ.