ಶಿಗ್ಗಾಂವಿ: ತೀವ್ರ ಜಿದ್ದಾಜಿದ್ದಿನ ಅಖಾಡದಲ್ಲಿ ಒಂದಾಗಿದ್ದ ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ.
ಇನ್ನು ಕೆಲ ಸುತ್ತಿನ ಮತ ಎಣಿಕೆ ಮಾತ್ರ ಬಾಕಿ ಇದೆ. ಯಾಸೀರ್ ಪಠಾಣ್ ಗೆಲುವು ಖಚಿತವಾಗಿದ್ದು, ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಇನ್ನು ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಖಚಿತವಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಹೊರಬೀಳಬೇಕಿದೆ.