ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಅಲ್ಪಸಂಖ್ಯಾತ ಅಭ್ಯರ್ಥಿಗೆ ‘ಕೈ’ ಟಿಕೆಟ್ ನೀಡಲಾಗಿದ್ದು, ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿಗೆ ಟಿಕೆಟ್ ಕೈತಪ್ಪಿದೆ.
ನವೆಂಬರ್ 13ರಂದು ನಡೆಯಲಿರುವ ಶಿಗ್ಗಂವಿ ಕ್ಷೇತ್ರದ ಉಪಚುನವಣೆಗೆ ಕಾಂಗ್ರೆಸ್ ಯಾಸೀರ್ ಅಹ್ಮದ್ ಅವರನ್ನು ಅರ್ಭ್ಯರ್ಥಿಯನ್ನಾಗಿ ಘೋಷಿಸಿದೆ. ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ಕೈತಪ್ಪಿದೆ. ಭಾರಿ ಪೈಪೋಟಿ ನಡುವೆ ಯಾಸೀರ್ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
2023ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲನುಭವಿಸಿದ್ದ ಯಾಸೀರ್ ಅಹ್ಮದ್ ಅವರನ್ನೇ ಕಾಂಗ್ರೆಸ್ ಉಪಚುನಾವಣೆಯಲ್ಲಿಯೂ ಮತ್ತೆ ಕಣಕ್ಕಿಳಿಸಿದೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.