alex Certify BIG NEWS: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ; ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಶಿಲ್ಪಾ ನಾಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಕ್ರೋಶ; ರಾಜೀನಾಮೆ ನೀಡಿದ ಐಎಎಸ್ ಅಧಿಕಾರಿ ಶಿಲ್ಪಾ ನಾಗ್

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಿರುಕುಳದಿಂದ ಬೇಸತ್ತು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಅವರು ದುರಹಂಕಾರಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಶಿಲ್ಪಾ ವಿನಾಕಾರಣ ನನ್ನ ಮೇಲಿನ ದ್ವೇಷಕ್ಕೆ ಅಧಿಕಾರಿಗಳಿಗೆ ರೋಹಿಣಿ ಸಿಂಧೂರಿ ತೊಂದರೆ ಕೊಡುತ್ತಿದ್ದಾರೆ. ಪರ್ಸನಲ್ ಆಗಿ ಟಾರ್ಗೆಟ್ ಮಾಡಲಾಗಿದೆ ಎಂದು ದೂರಿರುವ ಅವರು ಪಾಲಿಕೆ ಆಯುಕ್ತರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರತಿದಿನ ಹಿರಿಯ ಅಧಿಕಾರಿಗಳಿಗೆ ಅವಮಾನ ಮಾಡುತ್ತಿರುವ ರೋಹಿಣಿ ಸಿಂಧೂರಿ ಅವರು ನನ್ನ ವಿರುದ್ಧದ ವೈಯಕ್ತಿಕ ದ್ವೇಷಕ್ಕೆ ಅಧಿಕಾರಿಗಳಿಗೆ ಕರೆ ಮಾಡಿ ಅವಮಾನಿಸುತ್ತಿದ್ದಾರೆ. ಅವರ ಕಾಟಕ್ಕೆ ಬೇಸತ್ತ ಅಧಿಕಾರಿಗಳು ದೂರಿದ್ದರಿಂದ ನಾನೇ ಕೆಲಸಕ್ಕೆ ಗುಡ್ ಬೈ ಹೇಳುತ್ತೇನೆ ಎಂದು ಶಿಲ್ಪಾ ನಾಗ್ ತಿಳಿಸಿದ್ದಾರೆ.

ಯಾವುದೇ ವ್ಯಕ್ತಿ ಅವಮಾನ ಸಹಿಸಲು ಸಾಧ್ಯವಿಲ್ಲ. ನಾನು ನೋವಿನಿಂದ ರಾಜೀನಾಮೆ ನೀಡುತ್ತಿದ್ದೇನೆ. ನಾನು ಪ್ರತಿಭಟನಾರ್ಥವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...