ಶಿವಮೊಗ್ಗ: ಹಾಸ್ಟೆಲ್ ಊಟ ಸೇವಿಸಿದ್ದ 27 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಹ್ಯಾದ್ರಿ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ.
ಹಾಸ್ಟೆಲ್ ನಲ್ಲಿ ಊಟ ಸೇವಿಸಿದ್ದ ವಿದ್ಯಾರ್ಥಿಗಳಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಶುರುವಾಗಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.