ಶಿವಮೊಗ್ಗ : ಮನೆಯಲ್ಲಿ ಪೋಷಕರು ಕೆಲಸಕ್ಕೆ ಹೋಗು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹಳೇ ಕೋಡಿಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಾಗರ್ (29) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗು ಎಂದು ಮನೆಯವರು ಹೇಳಿದ್ದಕ್ಕೆ ಈತ ಫೆ.19 ರಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು, ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಕೊನೆಗೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಸಣ್ಣಪುಟ್ಟ ವಿಷಯಕ್ಕೂ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಕ್ಕೆ ಬರುತ್ತಿರುವುದು ನಿಜಕ್ಕೂ ದುರಂತವೇ ಸರಿ.