ಶಿವಮೊಗ್ಗ : ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅಖಾಡಕ್ಕಿಳಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ರ್ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತಿತರರಿದ್ದರು.
ಇಂದು ಗೀತಾ ತಮ್ಮ ಪತಿ ನಟ ಶಿವರಾಜ್ ಕುಮಾರ್ ಜೊತೆ ಭದ್ರಾವತಿಯಿಂದ ಪ್ರಚಾರ ಆರಂಭಿಸಿದ್ದಾರೆ. ಅವರಿಬ್ಬರೊಂದಿಗೆ ಸ್ಥಳೀಯ ಶಾಸಕ ಬಿಕೆ ಸಂಗಮೇಶ್ ಮತ್ತು ಸಾಗರದ ಬೇಳೂರು ಗೋಪಾಲಕೃಷ್ಣ ಮತ್ತಿತರರಿದ್ದರು. ಈ ವೇಳೆ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 400ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಭರ್ಜರಿ ಪ್ರಚಾರ ನಡೆಸಲು ಪ್ಲ್ಯಾನ್ ಮಾಡಲಾಗಿದೆ.