BIG NEWS : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣ : 40 ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

2 ಗುಂಪಿನ ನಡುವೆ ಕಲ್ಲು ತೂರಾಟ ನಡೆದು, 6 ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 40 ಕ್ಕೂ ಹೆಚ್ಚು ಜನರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಎರಡು ಗುಂಪುಗಳಿಂದ ನಡೆದ ಪರಸ್ಪರ ಕಲ್ಲು ತೂರಾಟದಿಂದ ಮನೆಗಳು, ವಾಹನಗಳ ಗಾಜು ಪುಡಿಪುಡಿಯಾಗಿವೆ. ಹಿಂದೂಗಳಿಗೆ ಸೇರಿದ 7 ಮನೆಗಳು ಹಾಗೂ 1 ಬೈಕ್, 1 ಕಾರು ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ರಾಗಿಗುಡ್ಡದಿಂದ ಗಾಂಧಿ ಬಜಾರಿಗೆ ಮೆರವಣಿಗೆ ತೆರಳುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಯಾಗಿ ಮೆರವಣಿಗೆಯಲ್ಲಿ ಇದ್ದವರು ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಮನೆಯ ಕಿಟಕಿಗಳಿಗೆ, ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ಸೇರಿದಂತೆ 6 ಮಂದಿ ಗಾಯಗೊಂಡಿದ್ದಾರೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read