alex Certify ಹೃದಯಾಘಾತ: ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ನಂದನ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಾಘಾತ: ಶಿವಮೊಗ್ಗದ ಪತ್ರಿಕಾ ಛಾಯಾಗ್ರಾಹಕ ನಂದನ್ ವಿಧಿವಶ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ನಂದನ್ (57) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇಂದು ರೈಲ್ವೆ ನಿಲ್ದಾಣ ಬಳಿ ಇರುವ ಎ.ಎ.ಕಾಲೋನಿಯಲ್ಲಿರುವ ನಿವಾಸದಲ್ಲಿ ನಂದನ್ ಪಾರ್ಥಿವ ಶಸೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಂಯಕ್ರಿಯೆ ನೆರವೇರಲಿದೆ.

ತಡರಾತ್ರಿ 1:30ರ ಸುಮಾರಿಗೆ ನಂದನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಂದನ್ ಇಹಲೋಕ ತ್ಯಜಿಸಿದ್ದಾರೆ.

ಹಲವು ವರ್ಷಗಳಿಂದ ನಂದನ್ ಶಿವಮೊಗ್ಗದಲ್ಲಿ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದರು. ಅವರು ತೆಗೆದ ಛಾಯಾಚಿತ್ರಗಳು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ, ಗೌರವಗಳಿಗೆ ಪಾತ್ರವಾಗಿದ್ದವು. ಕನ್ನಡಪ್ರಭ ಸೇರಿದಂತೆ ಹಲವು ಪತ್ರಿಕೆಗಳಿಗೆ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...