ಮಳೆಯ ಅಡ್ಡಿಯಿಂದಾಗಿ ಪ್ರೇಕ್ಷಕರಿಗೆ ಕಡಿಮೆ ಓವರ್ನ ಪಂದ್ಯವನ್ನು ನೋಡುವಂತಾಗಿದೆ. ನಿನ್ನೆ ಮಂಗಳೂರು ಡ್ರ್ಯಾಗನ್ಸ್ ಎದುರು ಹುಬ್ಬಳ್ಳಿ ಟೈಗರ್ಸ್ ಜಯಭೇರಿ ಆದರೆ ಮತ್ತೊಂದು ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಮೈಸೂರು ವಾರಿಯರ್ಸ್ ಎದುರು 4 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ .ಈ ಮೂಲಕ ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಬೆಂಗಳೂರು ಬ್ಲಾಸ್ಟರ್ಸ್ ಈ ಬಾರಿ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿದೆ.
ಇಂದು ಮಹಾರಾಜ ಟ್ರೂಪಿಯ ಐದನೇ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ಮತ್ತು ಮಂಗಳೂರು ಡ್ರ್ಯಾಗನ್ಸ್ ಮುಖಾಮುಖಿಯಾಗುತ್ತಿವೆ. ಎರಡು ತಂಡಗಳು ಜಯದ ಹುಡುಕಾಟದಲ್ಲಿದ್ದು, ಮತ್ತೊಂದು ರೋಮಾಂಚನಕಾರಿ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಗುಲ್ಬರ್ಗ ಮೈಸ್ಟಿಕ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ಸೆಣಸಾಡಲಿವೆ.