
ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಬಿ.ವೈ. ರಾಘವೇಂದ್ರ ಅವರು ಭೋವಿ ಮಠಕ್ಕೆ ಭೇಟಿ ನೀಡಿದ್ದರು. ಮಠದಲ್ಲಿ ವಿವಿಧ ಮಠಾಧೀಶರನ್ನು ಭೇಟಿಯಾಗಿದ್ದರು.
ಚಿತ್ರದುರ್ಗ ಭೋವಿಮಠದಲ್ಲಿ ಅವರು ನಡೆಸಿದ್ದಾರೆ. ಮಠದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪ ಕೇಳಿ ಬಂದಿದೆ. ಪೂರ್ವಾನುಮತಿ ಪಡೆದುಕೊಳ್ಳದೆ ಸಭೆ ನಡೆಸಿ ಭಾಷಣ ಮಾಡಲಾಗಿದೆ ಎಂದು ಚಿತ್ರದುರ್ಗ ಎಫ್.ಎಸ್.ಟಿ. ತಂಡದ ಅವಿನಾಶ್ ಎಂಬುವರು ದೂರು ನೀಡಿದ್ದಾರೆ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.