alex Certify ಶಿವಮೊಗ್ಗ : ‘APMC’ ಪರವಾನಗಿ ನವೀಕರಿಸಿಕೊಳ್ಳಲು ವರ್ತಕರಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ‘APMC’ ಪರವಾನಗಿ ನವೀಕರಿಸಿಕೊಳ್ಳಲು ವರ್ತಕರಿಗೆ ಸೂಚನೆ

ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ.

ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ ಮಾಡಿ, ನಿಗದಿತ ಶುಲ್ಕ ಪಾವತಿಸಿ ಅವಶ್ಯಕ ದಾಖಲೆಗಳೊಂದಿಗೆ ಫೆ.29 ರ ಒಳಗಾಗಿ ಕಾರ್ಯದರ್ಶಿ, ಎಪಿಎಂಸಿ, ಶಿವಮೊಗ್ಗ ಮತ್ತು ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಫೆ.29 ರ ನಂತರ ಲೈಸೆನ್ಸ್ ನವೀಕರಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಎಪಿಎಂಸಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...