ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕತಿ ಭವನ, ನಾಗರಾಜಪುರ ಎಕ್ಸ್ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.