ಶಿವಮೊಗ್ಗ: ಕಟ್ಟಡದ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆದಿದೆ.
ಗಾಂಧಿನಗರದ 1ನೇ ಪ್ಯಾರೆಲ್ ರಸ್ತೆಯಲ್ಲಿ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮುವರು ಯುವತಿಯರನ್ನು ರಕ್ಷಿಸಿದ್ದಾರೆ.
ಕಾಂಟ್ರಾಕ್ಟರ್ ಕಚೇರಿ ಹಾಗೂ ಗೋಡೌನ್ ಗಾಗಿ ನೆಲಮಾಳಿಗೆಯನ್ನು ಬಾಡಿಗೆಗೆ ಪಡೆಯಲಾಗಿತ್ತು. ಆದರೆ ಆರೋಪಿಗಳು ಇದನ್ನು ವೇಶ್ಯಾವಾಟಿಕೆ ಅಡ್ಡೆಯನ್ನಾಗಿ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಮೂವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.