ಶಿವಮೊಗ್ಗ : ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ, ಆಕ್ಷೇಪಣೆ ಆಹ್ವಾನ

ಶಿವಮೊಗ್ಗ : ನಟ ಪುನೀತ್ ರಾಜ್ ಕುಮಾರ್ ಅಗಲಿದರೂ ಅವರ ನೆನಪು ಮಾತ್ರ ಸದಾ ಹಸಿರಾಗಿದೆ.ಈಗಾಗಲೇ ಹೋಟೆಲ್, ಅಂಗಡಿಗಳಿಗೆ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡಲಾಗಿದೆ. ಅಲ್ಲದೇ ಬೆಂಗಳೂರು ನಗರದ ರಸ್ತೆಯೊಂದಕ್ಕೆ ಪುನೀತ್ ರಾಜ್ ಕುಮಾರ್  ಹೆಸರು ನಾಮಕರಣ ಮಾಡಲಾಗಿದೆ.

ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರಸ್ತೆಯೊಂದಕ್ಕೆ ಪುನೀತ್   ರಾಜ್ ಕುಮಾರ್   ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದೆ.

ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read