ಶಿವಮೊಗ್ಗ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಕೋಳಿ ಫಾರಂ ಕುಸಿದುಬಿದ್ದ ಪರಿಣಾಮ ಐದು ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಬಿರುಗಾಳಿ, ಮಳೆಯ ಅಬ್ಬರ ಹೆಚ್ಚಾಗಿದ್ದು, ಮೋಜಪ್ಪ ಹೊಸೂರು ಗ್ರಾಮದಲ್ಲಿ ಕೋಳಿ ಫಾರಂ ಏಕಾಏಕಿ ಕುಸಿದುಬಿದ್ದಿದೆ. 5000ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.
ಇಮ್ತಿಯಾಜ್ ಅಹ್ಮದ್ ಎಂಬುವವರಿಗೆ ಸೇರಿದ ಕೋಳಿ ಫಾರಂ ನಲ್ಲಿ ಈ ದುರಂತ ಸಂಭವಿಸಿದೆ. ಸುಮಾರು 6,500ಕ್ಕೂ ಹೆಚ್ಚು ಕೋಳಿಗಳನ್ನು ಇಲ್ಲಿ ಸಾಕಾಣಿಕೆ ಮಾಡಲಾಗುತ್ತಿತ್ತು. ಧಾರಾಕಾರವಾಗಿ ಸುರುಯುತ್ತಿದ್ದ ಮಳೆಯಿಂದಾಗಿ ಕೋಳಿ ಫಾರಂ ಶೆಡ್ ಸಂಪೂರ್ಣ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿದ ಕೋಳಿಗಳು ಸಾವನ್ನಪ್ಪಿವೆ.
ಘಟನಾ ಸ್ಥಳಕ್ಕೆ ತಹಶಿಲ್ದಾರ್ ಕಚೇರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.