ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.
ಸೋಮವಾರ ಸಂಜೆ ನಡೆದ ಶಿವಮೊಗ್ಗ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿನ ದರವನ್ನು 90 ಪೈಸೆ ಕಡಿತ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಮೊದಲು ಲೀಟರ್ ಹಾಲಿಗೆ 32.99 ರೂಪಾಯಿ ನೀಡಿ ರೈತರಿಂದ ಹಾಲು ಖರೀದಿಸಲಾಗುತ್ತಿತ್ತು. ಆ ದರವನ್ನು 32.09 ರೂಪಾಯಿಗೆ ಇಳಿಕೆ ಮಾಡಲಾಗಿದೆ.
ರಾಜ್ಯ ಸರ್ಕಾರ 2023ರಲ್ಲಿ ಹಾಲು ಮಾರಾಟ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದ್ದು, ಇತ್ತೀಚೆಗೆ ಸರ್ಕಾರ ಮತ್ತೆ ಪ್ರತಿ ಲೀಟರ್ ಗೆ 2 ರೂಪಾಯಿ ದರ ಹೆಚ್ಚಳ ಮಾಡಿ ಆ ಲಾಭವನ್ನು ರೈತರಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಖರೀದಿ ದರ ಕಡಿತಗೊಳಿಸಲಾಗಿದೆ. 6.45 ಕೋಟಿ ರೂಪಾಯಿ ನಷ್ಟದಲ್ಲಿರುವ ಒಕ್ಕೂಟ ಹಾಲು ಖರೀದಿ ದರ ಕಡಿತದ ಮೂಲಕ ನಷ್ಟದ ಮೊತ್ತ ಸರಿದೂಗಿಸಿಕೊಳ್ಳಲು ನಿರ್ಧಾರ ತಗೊಂಡಿದೆ ಎಂದು ಹೇಳಲಾಗಿದೆ.